ಉಡುಪಿ : ಆಗಸ್ಟ್ 19: ಮೀನುಗಾರರ ಸಂಘದ ವತಿಯಿಂದ ಸಮಸ್ತ ಮೀನುಗಾರರ ಶೇಯೋಭಿವೃದ್ಧಿಗಾಗಿ ನೂಲ ಹುಣ್ಣಿಮೆ ದಿನವಾದ ಇಂದು ಮಲ್ಪೆಯ ವಡಬಾಂಡೇಶ್ವರ ಕಡಲ ಕಿನಾರೆಯಲ್ಲಿ ಸಮುದ್ರ ಪೂಜೆಯನ್ನು ನೆರವೇರಿಸಲಾಯಿತು
ಮೀನುಗಾರಿಕಾ ರಜೆ ಮುಗಿದ ಬಳಿಕ ಪ್ರಕ್ಷುಬ್ದಗೊಂಡಿರುವ ಸಮುದ್ರ ರಾಜನನ್ನು ಶಾಂತಗೊಳಿಸುವ ಸಾಂಪ್ರದಾಯವೇ ಸಮುದ್ರ ಪೂಜೆ.
ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಆಯೋಜಿಸಿದ್ದ ಸಮುದ್ರ ಪೂಜೆ ಕಾರ್ಯಕ್ರಮದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಈ ಬಾರಿಯ ಮೀನುಗಾರಿಕಾ ಋತುವಿನಲ್ಲಿ ಹೇರಳ ಮತ್ಸ್ಯ ಸಂಪತ್ತಿನ ಮೂಲಕ ಮೀನುಗಾರರ ಬದುಕು ಸಮೃದ್ಧವಾಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ದಯಾನಂದ ಕೆ. ಸುವರ್ಣ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಮಾಜಿ ಸಚಿವರಾದ ಶ್ರೀ ಪ್ರಮೋದ್ ಮಧ್ವರಾಜ್, ವಿವಿಧ ಮೀನುಗಾರ ಸಂಘಟನೆಗಳ ಪ್ರಮುಖರು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.