ಕಾರ್ಕಳ:ಆಗಸ್ಟ್ 24:ನಗರ ಠಾಣೆ ವ್ಯಾಪ್ತಿಯಲ್ಲಿ ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪ ಕೇಳಿ ಬಂದಿದೆ.
ಕುಕ್ಕುಂದೂರು ಗ್ರಾಮದ 21ರ ವಯಸ್ಸಿನ ಯುವತಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.
ಶುಕ್ರವಾರ ಸಂಜೆ 7 ಗಂಟೆಯ ವೇಳೆ ಘಟನೆ ನಡೆದಿದ್ದಾಗಿ ತಿಳಿದುಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿರುವ ಯುವತಿಯನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆ ಎದುರು ಹಿಂದೂ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿದ್ದು, ಪೊಲೀಸರು ತೀವ್ರ ನಿಗಾ ಇರಿಸಿದ್ದಾರೆ. ಪ್ರಕರಣ ಸಂಬಂಧ ಅಲ್ತಾಫ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.