ಉಡುಪಿ :ಆಗಸ್ಟ್ 25:ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿದ್ದು, ವಂಚಕರ ಕುತಂತ್ರದ ಬಲೆಗೆ ಬಿದ್ದ ವೈದ್ಯರು ಈ ಕುರಿತು ದೂರು ನೀಡಿದ್ದರು
ಶ್ರೀ ಅರುಣ್ ಕುಮಾರ್ ಗೋವಿಂದ ಕರ್ನವರ್ ರವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 61/2024 ಕಲಂ: 66(C) 66(D) ಐ.ಟಿ. ಕಾಯ್ದೆ ಮತ್ತು ಕಲಂ 318(4) BNS ಯಂತೆ ಪ್ರಕರಣ ದಾಖಲಾಗಿತ್ತು
ಇದೀಗ ಉಡುಪಿ ಸೆನ್ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪಟ್ಟಹಚ್ಚಿ ಅವರಿಂದ 5 ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ, 13,95,000/- ನಗದನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ
ಘಟನೆ ಯ ವಿವರ
ಯಾರೋ ಅಪರಿಚಿತರು ಕರೆಮಾಡಿ ಕಸ್ಟಮ್ಸ್‌ನಿಂದ ಕರೆಮಾಡುತ್ತಿರುವುದಾಗಿ ತಿಳಿಸಿ ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ FedEx ಕೋರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎ.ಟಿ.ಎಮ್ ಕಾರ್ಡ್, 200 ಗ್ರಾಂ ಎಂ.ಡಿ.ಎಮ್.ಎ ಹಾಗೂ 5000 USD ಇದ್ದು ಸದ್ರಿ ಕೋರಿಯರ್ ಪ್ರಸ್ತುತ ಮುಂಬಯಿ ಕಸ್ಟಮ್ಸ್‌ರವರ ವಶದಲ್ಲಿ ಇರುವುದಾಗಿ ದಿನಾಂಕ:ಜುಲೈ 29ರಂದು ಮೊಬೈಲ್ ನಂಬ್ರ+919232037584 ರಿಂದ ತಿಳಿಸಿರುತ್ತಾರೆ.
ಮಾಹಿತಿದಾರರು ಸದರಿ ಕೋರಿಯರ್ ತಾನು ಮಾಡಿಲ್ಲವಾಗಿ ತಿಳಿಸಿದಾಗ ಅಪರಿಚಿತ ವ್ಯಕ್ತಿ ಆತನ ಮೇಲಾಧಿಕಾರಿಯವರಿಗೆ ಹಾಟ್‌ಲೈನ್ ಮುಖೇನಾ ಸಂಪರ್ಕ ಕಲ್ಪಿಸಿಕೊಟ್ಟಿದ್ದು, ಸದ್ರಿ ಹಾಟ್‌ಲೈನ್‌ನಲ್ಲಿ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಪಿರ್ಯಾದಿದಾರರಿಗೆ ನಿಮ್ಮ ಆಧಾರ್ ಕಾರ್ಡ್‌ನ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿ ನಮ್ಮ ಕೇಂದ್ರ ಕಚೇರಿಗೆ ಕರೆಯನ್ನು ಫಾರ್ವಡ್ ಮಾಡುವುದಾಗಿ ತಿಳಿಸಿ ನಂತರದಲ್ಲಿ ಕರೆ ಸ್ವೀಕರಿಸಿದ ವ್ಯಕ್ತಿ ನಿಮ್ಮ ಆಧಾರ್ ಕಾರ್ಡ್ ವಿವಿಧ ಬ್ಯಾಂಕ್ ಖಾತೆಗಳಿಗೆ ಲಿಂಕ್ ಆಗಿದ್ದು ಹಾಗೂ ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿರುವುದಾಗಿ ತಿಳಿಸಿರುತ್ತಾರೆ. ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದು Skype App ಮೂಲಕ ವಿಡಿಯೋ ಮಾನಿಟರಿಂಗ್ ಮಾಡುವುದಾಗಿ ತಿಳಿಸಿದ್ದು, ಅದರಂತೆ ಮಾಹಿತಿದಾರರನ್ನು ದಿನಾಂಕ:29/07/2024 ರಿಂದ ದಿನಾಂಕ:09/08/2024ರ ತನಕ ಅವರ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆ ಯಾರೊಂದಿಗೂ ಸಂಪರ್ಕಿಸದಂತೆ ಸೂಚಿಸಿರುತ್ತಾರೆ. ನಂತರದಲ್ಲಿ ಸದ್ರಿ ಪ್ರಕರಣವನ್ನು ಸರಿಪಡಿಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು, ಅದರಂತೆ ಪಿರ್ಯಾದಿದಾರರು ತನ್ನ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಉಳಿತಾಯ ಖಾತೆಯಿಂದ ದಿನಾಂಕ:06/08/2024 ರಿಂದ ದಿನಾಂಕ:09/08/2024ರ ತನಕ ಹಂತ ಹಂತವಾಗಿ ಒಟ್ಟು ರೂಪಾಯಿ 1,33,81,000/- ಹಣವನ್ನು ವರ್ಗಾಯಿಸಿರುತ್ತಾರೆ. ಈ ಬಗ್ಗೆ ಶ್ರೀ ಅರುಣ್ ಕುಮಾರ್ ಗೋವಿಂದ ಕರ್ನವರ್ ರವರು ನೀಡಿದ ದೂರಿನಂತೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 61/2024 ಕಲಂ: 66(C) 66(D) ಐ.ಟಿ. ಕಾಯ್ದೆ ಮತ್ತು ಕಲಂ 318(4) BNS ಯಂತೆ ಪ್ರಕರಣ ದಾಖಲಾಗಿರುತ್ತದೆ.
ಈ ಬಗ್ಗೆ ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ರವರ ನೇತೃತ್ವದಲ್ಲಿ ಸೆನ್ ಪೊಲೀಸ್ ಠಾಣಾ ಪಿ.ಎಸ್.ಐ, ಅಶೋಕ್ ಸಿಬ್ಬಂದಿಗಳಾದ ಪ್ರವೀಣ ಶೆಟ್ಟಿಗಾರ್, ರಾಜೇಶ್, ಅರುಣ ಕುಮಾರ್, ಯತೀನ್ ಕುಮಾರ್, ರಾಘುವೇಂದ್ರ ಕಾರ್ಕಡ, ದಿಕ್ಷೀತ್, ಪ್ರಶಾಂತ್ , ಮುತ್ತೆಪ್ಪ ಆಡೀನ್, ಮಾಯಪ್ಪ ಗಡದೆ, ಪರಶುರಾಮ ಮತ್ತು ಸುದೀಫ್ ರವರನ್ನೊಳಗೊಂಡ ವಿಶೇಷ ತಂಡವ ಆರೋಪಿಗಳಾದ
(1) ನವಾದಿಯಾ ಮುಖೇಶ್ ಭಾಯಿ ಗಣೇಶ್‌ಭಾಯಿ(44), ತಂದೆ: ದಿವಂಗತ ಗಣೇಶ್ ಭಾಯಿ, ವಾಸ: ನಂಬ್ರ 51, ನೆಲಮಾಳಿಗೆ, ಸರ್ದಾರ್ ಪಟೇಲ್ ನಗರ ಸೊಸೈಟಿ, ದಭೋಲಿ ರಸ್ತೆ, ಸೂರತ್ ಸಿಟಿ, ಸೂರತ್ ಜಿಲ್ಲಾ, ಗುಜರಾತ್ ರಾಜ್ಯ
2) ಧರಮ್‌ಜೀತ್ ಕಮಲೇಶ್ ಚೌಹಾನ್, 28 ವರ್ಷ, ತಂದೆ: ಕಮಲೇಶ್ ಭಾಯಿ ಚೌಹಾನ್, ವಾಸ: ರಾಧೇ ಸಿಯಾಮ್, ಪೇರೆಮೌಂಟ್, ಸ್ಟ್ರೀಟ್ ನಂ. 3, ಹನುಮಾನ್ ಜಿ ದೇವಸ್ಥಾನದ ಎದುರುಗಡೆ, ಆಕಾಶವಾಣಿ ಚೌಕ್, ಯೂನಿವರ್ಸಿಟಿ ರಸ್ತೆ, ರಾಜ್‌ಕೋಟ್ ಜಿಲ್ಲಾ, ಗುಜರಾತ್ ರಾಜ್ಯ
ಆರೋಪಿಗಳಿಂದ 5 ಮೊಬೈಲ್ ಪೋನ್ ಗಳನ್ನು ಹಾಗೂ ಆರೋಪಿಗಳಿಂದ ರೂ, 13,95,000/- ನಗದನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ
ಸೆನ್ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ರಾಮಚಂದ್ರ ನಾಯಕ್ ರವರ ನೇತೃತ್ವದಲ್ಲಿ ಸೆನ್ ಪೊಲೀಸ್ ಠಾಣಾ ಪಿ.ಎಸ್.ಐ, ಅಶೋಕ್ ಸಿಬ್ಬಂದಿಗಳಾದ ಪ್ರವೀಣ ಶೆಟ್ಟಿಗಾರ್, ರಾಜೇಶ್, ಅರುಣ ಕುಮಾರ್, ಯತೀನ್ ಕುಮಾರ್, ರಾಘುವೇಂದ್ರ ಕಾರ್ಕಡ, ದಿಕ್ಷೀತ್, ಪ್ರಶಾಂತ್ , ಮುತ್ತೆಪ್ಪ ಆಡೀನ್, ಮಾಯಪ್ಪ ಗಡದೆ, ಪರಶುರಾಮ ಮತ್ತು ಸುದೀಫ್ ರವರನ್ನೊಳಗೊಂಡ ವಿಶೇಷ ತಂಡ ಕಾರ್ಯಾಚರಣೆ ಯಲ್ಲಿ ಪಾಲ್ಗೊಂಡಿದ್ದರು