ಕಟಪಾಡಿ: ಆಗಸ್ಟ್ 28:ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಇಂದು ಹೃದಯಾಘಾತ ದಿಂದ ನಿಧನರಾಗಿದ್ದಾರೆ
ಇವರು ಐದು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು ಇವರು, ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮೃತರು ಪತ್ನಿ ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.