ಪಡುಬಿದ್ರಿ: ಆಗಸ್ಟ್ 28;ಉಚ್ಚಿಲ ಶ್ರೀಮಹಾಲಕ್ಷ್ಮಿ ದೇವಸ್ಥಾನದ ಪ್ರಾಂಗಣದಲ್ಲಿ ಉಚ್ಚಿಲ ದಸರಾ-24 ಆಮಂತ್ರಣ ಪತ್ರಿಕೆಯನ್ನು ಜಿ. ಶಂಕರ್ ಮಂಗಳವಾರ ಬಿಡುಗಡೆ ಮಾಡಿದರು.
ನಂತರ ಮಾತನಾಡಿದ ಅವರು ಅ. 3ರಿಂದ 12ರವರೆಗೆ ನಡೆಯುವ ಉಚ್ಚಿಲ ದಸರಾವನ್ನು ಈ ಬಾರಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದರು
ನೃತ್ಯ ವೈವಿಧ್ಯ, ದೇಹದಾಢ್ಯ ಸ್ಪರ್ಧೆ, ಹೆಣ್ಣು ಮಕ್ಕಳ ಹುಲಿ ಕುಣಿತ ಸ್ಪರ್ಧೆ, ಸಾಮೂಹಿಕ ದಾಂಡಿಯ ನೃತ್ಯ ಇತ್ಯಾದಿ ವಿಶೇಷಗಳು ಇರಲಿವೆ’ ಎಂದರು.
ದೇವಸ್ಥಾನದ ಪ್ರಧಾನ ಅರ್ಚಕ ಕೆ.ವಿ. ರಾಘವೇಂದ್ರ ಉಪಾಧ್ಯಾಯ ಆಮಂತ್ರಣ ಪತ್ರಿಕೆಗೆ ಪೂಜೆ ಸಲ್ಲಿಸಿ, ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.