ಕಾರ್ಕಳ : ಆಗಸ್ಟ್ 29;ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ, ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಮತ್ತು ಸ್ಥಳೀಯ ಸಂಸ್ಥೆ, ಕಾರ್ಕಳ ಇವರ ಸಹಯೋಗದಲ್ಲಿ ಶ್ರೀಮದ್ ಭುನೇಂದ್ರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಬನ್ನಿಸ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಕಬ್ ತಂಡದ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, ಹಾಗೂ ಗೈಡ್ಸ್ ತಂಡದ ವಿದ್ಯಾರ್ಥಿಗಳು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
ಇವರನ್ನು ಶಾಲಾ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯನಿ ಹಾಗೂ ಶಿಕ್ಷಕ ವೃಂದದವರು ಅಭಿನಂದಿಸಿದರು.