ಬೆಂಗಳೂರು :ಸೆಪ್ಟೆಂಬರ್ 05: ರಾಜ್ಯಾಧ್ಯಂತ ನಗರ, ಪಟ್ಟಣ ಪ್ರದೇಶಗಳಲ್ಲಿ 10 ಸಾವಿರ ಕ್ರೆಶ್ ಕೇಂದ್ರಗಳನ್ನು ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳ ಪಕ್ಕದಲ್ಲೇ ಪ್ರತ್ಯೇಕವಾಗಿ ಮಕ್ಕಳ ಪಾಲನಾ ಕೇಂದ್ರ ತೆರೆಯಲಾಗುತ್ತದೆ ಎಂದಿದ್ದಾರೆ.
6 ತಿಂಗಳಿನಿಂದ 3 ವರ್ಷದ ಮಕ್ಕಳನ್ನು ಇಲ್ಲಿ ಪಾಲನೆ ಮಾಡಲಾಗುತ್ತದೆ. ಮನೆಗೆಲಸ, ಕಾರ್ಖಾನೆ, ಇತರ ಕೆಲಸಗಳಿಗೆ ಹೋಗುವ ಮಹಿಳೆಯರು ತಮ್ಮ ಮಕ್ಕಳನ್ನು ಈ ಕೇಂದ್ರಗಳಲ್ಲಿ ಬಿಟ್ಟು ಹೋಗಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.