ಬೆಂಗಳೂರು : ಸೆಪ್ಟೆಂಬರ್ 05: ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರಗಳನ್ನು ರಾಜ್ಯಾಧ್ಯಂತ ಸ್ಥಾಪನೆ ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಿಸಿದ್ದಾರೆ.
ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ಆಧುನಿಕ ಮಾದರಿಯಲ್ಲಿ 17 ಸಾವಿರ ಅಂಗನವಾಡಿ ಕೇಂದ್ರ ತೆರೆಯಲು ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಅದಕ್ಕಾಗಿ 104 ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ. ಮುಂದಿನ ದಿನಗಳಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.