ಬೆಂಗಳೂರು : ಸೆಪ್ಟೆಂಬರ್ 06:ಗೌರಿ ಗಣೇಶ ಚತುರ್ಥಿ ಪ್ರಯುಕ್ತ ಗಣಪತಿ ವಿಸರ್ಜನೆ ದಿನಗಳಾದ 3ನೇ, 5ನೇ ದಿನ ಮತ್ತು 11 ನೇ ದಿನಗಳಂದು ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಮಾಡದಂತೆ, ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯದಂತೆ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತ ಅಧಿಕಾರ ಚಲಾಯಿಸಿ, ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಗಣಪತಿ ವಿಸರ್ಜನೆಯ ಮೂರನೇ ದಿನವಾದ ಸೆ.09 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.10 ರ ಬೆಳಿಗ್ಗೆ 06 ಗಂಟೆಯವರೆಗೆ ಮತ್ತು ಐದನೇ ದಿನವಾದ ಸೆ.11 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.12 ರ ಬೆಳಿಗ್ಗೆ 06 ಗಂಟೆಯವರೆಗೆ ನಿಷೇಧಿಸಲಾಗಿದೆ.
ಗಣಪತಿ ವಿಸರ್ಜನೆಯ 11ನೇ ದಿನವಾದ ಸೆ.17 ರಂದು ಬೆಳಿಗ್ಗೆ 06 ಗಂಟೆಯಿಂದ ಸೆ.18 ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ, ಮದ್ಯ ಸಾಗಾಣಿಕೆ ಹಾಗೂ ಮದ್ಯದಂಗಡಿ, ಬಾರ್-ರೆಸ್ಟೋರೆಂಟ್‌ಗಳನ್ನು ತೆರೆಯುವಂತಿಲ್ಲ.
ಈ ಆದೇಶವು ಡಿಸ್ಟಲರೀಸ್ ರಾಜ್ಯ ವಿವಿಧ ಕೆಎಸ್‌ಪಿಬಿಸಿಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ತಿಳಿಸಲಾಗಿದೆ.