ಉಡುಪಿ: ಸೆಪ್ಟೆಂಬರ್ 08:ಗಣೇಶ ಚತುರ್ಥಿ ಹಬ್ಬದ ಸಂದರ್ಭ ಪ್ರಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಗುಣಮಟ್ಟ ಮತ್ತು ಸುರಕ್ಷತೆ ಖಚಿತಪಡಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಪ್ರಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭ ಎಫ್ಎಸ್‌ಎಸ್‌ಎಐ ನೋಂದಣಿ, ಪರವಾನಗಿ ಪಡೆದಿರುವ ವ್ಯಕ್ತಿ, ಸಂಸ್ಥೆಗಳಿಂದ ಮಾತ್ರ ವಿನಿಯೋಗವಾಗುವ ಪ್ರಸಾದ ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಸೂಚಿಸಿದ್ದಾರೆ.