ಮಣಿಪಾಲ : ಸೆಪ್ಟೆಂಬರ್ 09:ಕುಂದಾಪುರ ಕಾಲೇಜಿನ ಪ್ರಾಂಶುಪಾಲರಿಗೆ ಘೋಷಿಸಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ ಶುಕ್ರವಾರ ಮಣಿಪಾಲ್ ದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
ಹೆಬ್ರಿ ತಾಲೂಕಿನ ಶ್ರೀಶೈಲ, ಚಾರ ಗ್ರಾಮದ ಸೌರಭ್ ಬಲ್ಲಾಳ್ ಅವರು ಮಣಿಪಾಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿಜೆಪಿ ಕಾರ್ಯಕರ್ತರು ಕೋಮುಗಲಭೆ ಸೃಷ್ಟಿಸುವ ಉದ್ದೇಶದಿಂದ ಕೃತ್ಯ ಎಸಗಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ 10 ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.