ಉಡುಪಿ:ಸೆಪ್ಟೆಂಬರ್ 09:ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಈ ಕಾಲೇಜಿಗೆ ನ್ಯಾಕ್‌ನಲ್ಲಿ 3.12 ಸಿಜಿಪಿಎಯೊಂದಿಗೆ ಎ ಗ್ರೇಡ್ ದೊರಕಿದ್ದು,ಈ ಪ್ರಯುಕ್ತ ಪ್ರಶಸ್ತಿ ಪ್ರಧಾನ ಸಮಾರಂಭವು ಶಿಕ್ಷಕರ ದಿನಾಚರಣೆಯಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು.
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ ಶೆಟ್ಟಿ ಹಾಗೂ ಐಕ್ಯೂಎಸಿ ಸಂಚಾಲಕ ಸೋಜನ್ ಕೆ.ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಇಲಾಖಾ ಮೇಲಾಧಿಕಾರಿಗಳು ಭಾಗವಹಿಸಿದ್ದರು.