ಉಡುಪಿ :ಸೆಪ್ಟೆಂಬರ್ 13:ಬನ್ನಂಜೆಯ ನಿವಾಸಿ ನಾಗಪ್ಪ ನಡುವಿನಮನೆ (31) ಎಂಬ ಯುವಕ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.5 ಅಡಿ 4 ಇಂಚು ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ, ದುಂಡುಮುಖ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.