ಬ್ರಹ್ಮಾವರ: ಸೆಪ್ಟೆಂಬರ್ 15:ನಾಲ್ವರು ಹುಡುಗರು ಉಪ್ಪೂರು ಸರಕಾರಿ ಪ್ರೌಢ ಶಾಲೆ ಬಳಿ ಶನಿವಾರ ಬೆಳಗ್ಗೆ ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ, ಅಸಭ್ಯವಾಗಿ ಕೈಸನ್ನೆ ಮಾಡಿ ಚುಡಾಯಿಸಿದ ಘಟನೆ ನಡೆದಿದ್ದು ಈ ಕುರಿತು ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
9ನೇ ತರಗತಿ ಬಾಲಕಿ ಶಾಲೆ ಎದುರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎರಡು ಸ್ಕೂಟಿಯಲ್ಲಿ ಬಂದ ನಾಲ್ವರು ಹುಡುಗರು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ . ನಾಲ್ವರನ್ನೂ ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ .