ಉಡುಪಿ: ಉಡುಪಿ ಪೊಲೀಸ್ ವೈರ್ಲೆಸ್ ವಿಭಾಗದ ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ (52) ಅವರು ಮಂಗಳವಾರ (ಸೆ.17) ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.
ನಾಲ್ಕು ವರ್ಷಗಳಿಂದ ಉಡುಪಿ ಜಿಲ್ಲಾ ಪೊಲೀಸ್ನ ವೈರ್ಲೆಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಈ ಹಿಂದೆ ಅವರು ಮಲ್ಪೆಯ ಕರಾವಳಿ ಭದ್ರತಾ ಪೊಲೀಸ್ನಲ್ಲಿ ಕೆಲಸ ಮಾಡುತ್ತಿದ್ದರು. ನಿತ್ಯಾನಂದ ಶೆಟ್ಟಿ ರಾತ್ರಿ ಪಾಳಿಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದು, ಪಾಳಿ ಮುಗಿಸಿ ಮನೆಗೆ ಮರಳಿದ್ದರು.