ಉಡುಪಿ: ಸೆಪ್ಟೆಂಬರ್ 20: ಉಡುಪಿಯಲ್ಲಿ ಚಲಿಸುತ್ತಿರುವ ರೈಲನ್ನು ಹತ್ತಲು ಹೋಗಿ ಮಹಿಳೆ ಆಯತಪ್ಪಿ ಬಿದ್ದಿದ್ದಾರೆ ಈ ವೇಳೆ ತಕ್ಷಣ ಅಲ್ಲೇ ಇದ್ದ ಆರ್ ಪಿ ಎಫ್ ಮಹಿಳಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಉಡುಪಿಯಲ್ಲಿ ಮಂಗಳೂರು ಮತ್ತು ಮಡಗಾಂವ್ ಮಧ್ಯ ಚಲಿಸುತ್ತಿದ್ದ ರೈಲನ್ನು ಹತ್ತಲು ಓಡುತ್ತಿದ್ದ ಮಹಿಳೆಯನ್ನು ಆರ್ ಪಿ ಎಫ್ ಮಹಿಳಾ ಸಿಬ್ಬಂದಿ ರಕ್ಷಿಸಿದ್ದಾರೆ. ಬೆಳಗ್ಗೆ ನಡೆದ ಘಟನೆ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳೂರು ಮಡಗಾಂವ್ ರೈಲು ಹತ್ತುವಾಗ ಈ ಒಂದು ದುರಂತ ಸಂಭವಿಸಿದೆ. ಈ ವೇಳೆ ಆರ್ಪಿಎಫ್ ಮಹಿಳಾ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಇದಿಗ ಆರ್ಪಿಎಫ್ ಮಹಿಳಾ ಸಿಬ್ಬಂದಿ ಅರ್ಪಣಾ ಕಾರ್ಯಕ್ಕೆ ಎಲ್ಲರಿಂದ ಇದೀಗ ಶ್ಲಾಘನೆ ವ್ಯಕ್ತವಾಗುತ್ತಿದೆ.