ಉಡುಪಿ, ಸೆಪ್ಟೆಂಬರ್ 21: ದೀಪಾವಳಿ ಹಬ್ಬದ ಸಂದರ್ಭದಲ್ಲಿ (ಅಕ್ಟೋಬರ್ 30 ರಿಂದ ನವೆಂಬರ್ 2ರವರೆಗೆ ಮಾತ್ರ) ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಎಲ್ಇ-5ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆ ಪಡೆಯಲು ಮುಂಚಿತವಾಗಿ ಎಇ-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರ ವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾ ಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾ ನಿಗೆಯನ್ನು ನೀಡುವ ಬಗ್ಗೆ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು.