ಸೆಪ್ಟೆಂಬರ್ 22:ಮುಖ್ಯಮಂತ್ರಿ ಸಿದ್ದರಾಮಯ್ಯ ತುಂಗಭದ್ರಾ ಅಣೆಕಟ್ಟೆಗೆ ಬಾಗಿನ ಅರ್ಪಿಸಿದರು
ಅಣೆಕಟ್ಟೆ 19ನೇ ಕ್ರೆಸ್ಟ್ ಗೇಟ್ ಕೊಚ್ವಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ಹರಿದು ಹೋಗಿದ್ದನ್ನು ಪರಿಶೀಲಿಸಲು ಆಗಸ್ಟ್ 13 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಣೆಕಟ್ಟೆಗೆ ಆಗಮಿಸಿದ್ದರು.
ತುಂಗಭದ್ರಾ ಅಣೆಕಟ್ಟು ಮತ್ತೆ ಮೈ ತುಂಬಿಕೊಳ್ಳುತ್ತದೆ. ಆಗ ನಾನೇ ಬಂದು ಬಾಗಿನ ಅರ್ಪಿಸುತ್ತೇನೆ ಎಂದು ಆಗಸ್ಟ್ 13 ರಂದು ಹೇಳಿದ್ದರು.
ಮುಖ್ಯಮಂತ್ರಿಗಳ ಮಾತು ಮತ್ತು ಆಶಯ ಈಡೇರಿದ ಸಂಭ್ರಮದ ಕ್ಷಣಕ್ಕೆ ಇಡೀ ರಾಜ್ಯ ಇಂದು ಸಾಕ್ಷಿಯಾಯಿತು.
ಜಲ ಸಂಪನ್ಮೂಲ ಸಚಿವರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಜಮೀರ್ ಅಹಮದ್, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿರಾಜ್ ತಂಗಡಗಿ, ಸಚಿವರುಗಳಾದ ಬೋಸ್ ರಾಜ್, ಶರಣಪ್ರಕಾಶ್ ಪಾಟೀಲ್, ಕೊಪ್ಪಳ ಸಂಸದರಾದ ರಾಜಶೇಖರ್ ಹಿಟ್ನಾಳ್, ಬಳ್ಳಾರಿ ಸಂಸದರಾದ ಈ.ತುಕಾರಾಮ್ ಹಾಗೂ ಎರಡೂ ಜಿಲ್ಲೆಗಳ ಶಾಸಕರುಗಳು, ಜಲ ಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.