ಉಡುಪಿ, ಸೆಪ್ಟೆಂಬರ್ 24: ರವಿವಾರದಿಂದ ಪ್ರಾರಂಭಗೊಂಡಿರುವ ಮಳೆ, ಇಂದು ಕೂಡ ಮುಂದುವರಿಯುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಯ ವರದಿ ತಿಳಿಸಿದೆ.
ಇಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಅದರಲ್ಲೂ ಉತ್ತರ ಕನ್ನಡದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.