ಕಾರ್ಕಳ :ಸೆಪ್ಟೆಂಬರ್ 26:ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಮತ್ತು ರೋಟ್ರಾಕ್ಟ್ ಕ್ಲಬ್ ಶ್ರೀಭುವನೇಂದ್ರ ಕಾಲೇಜು ಇವುಗಳ ವತಿಯಿಂದ ಕಾರ್ಕಳ ಟಿಎಂಪೈ ರೋಟರಿ ಆಸ್ಪತ್ರೆಯ ಸಹಯೋಗದಲ್ಲಿ ವಿಶ್ವ ಹೃದಯ ದಿನಾಚರಣೆಯ ಅಂಗವಾಗಿ ಸೆ.29ರಂದು ಹೃದಯಕ್ಕಾಗಿ ನಡಿಗೆ ಕಾರ್ಯಕ್ರಮ ನಡೆಯಲಿದೆ.
ಬೆಳಗ್ಗೆ 7.30ಕ್ಕೆ ಕಾರ್ಕಳ ಅನಂತಶಯನ ವೃತ್ತದಲ್ಲಿ ಕಾರ್ಕಳದ ಸಿ.ಎ. ಕೆ. ಕಮಲಾಕ್ಷ ಕಾಮತ್ ಅವರು ಚಾಲನೆ ನೀಡಲಿದ್ದು, ಅಲ್ಲಿಂದ ಹೊರಟ ನಡಿಗೆ ಕಾರ್ಕಳ ಪೇಟೆ ಮುಖ್ಯ ರಸ್ತೆಯಲ್ಲಿ ಸಾಗಿ ಡಾ.ಟಿ.ಎಂಎ. ಪೈ ರೋಟರಿ ಆಸ್ಪತ್ರೆಯ ಬಳಿ ಸಂಪನ್ನಗೊಳ್ಳಲಿದೆ. ಆಸ್ಪತ್ರೆಯ ಆವರಣದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ “ಇರುವುದೊಂದೇ ಹೃದಯ ಅದನ್ನು ರಕ್ಷಿಸಿ” ಎಂಬ ಕಿರು ಪ್ರಹಸನದ ಸ್ಪರ್ಧೆ ನಡೆಯಲಿದೆ.
ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಕೆಎಂಸಿಯ ಹೃದ್ರೋಗ ತಜ್ಞ ಡಾ. ಪದ್ಮನಾಭ ಕಾಮತ್ ಇವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಹೃದ್ರೋಗ ತಜ್ಞ ಡಾ. ದಿತೇಶ್, ರೋಟರಿ ಮಾಜಿ ಜಿಲ್ಲಾ ಗವರ್ನರ್ ಡಾ. ಭರತೇಶ್ ಆದಿರಾಜ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.