ಬೈಂದೂರು:ಸೆಪ್ಟೆಂಬರ್ 27:ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಲಕ್ಷ್ಮೀ ನಾರಾಯಣ ಅಲ್ಪ ಕಾಲದ ಅಸೌಖ್ಯದಿಂದ ಬೆಂಗಳೂರಿನಲ್ಲಿ ಶುಕ್ರವಾರ ಬೆಳಿಗ್ಗೆ ನಿಧನ ರಾದರು.ಅವರು ಬೈಂದೂರು ಕ್ಷೇತ್ರದ ಮಾಜಿ ಶಾಸಕರಾಗಿದ್ದು ನೇರ ನುಡಿಯ ಜೊತೆಗೆ ಕ್ಷೇತ್ರದ ಅಭೀವ್ರದ್ದಿಗೆ ವಿಶೇಷ ಆದ್ಯತೆ ನೀಡಿದ್ದರು.
ರಾಮಕ್ಷತ್ರತ್ರಿಯ ಸಂಘ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ಸಕ್ರೀಯರಾಗಿದ್ದರು.ಮ್ರತರು ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಪತ್ನಿ ಕೆಲವು ವರ್ಷಗಳ ಹಿಂದೆ ಅಗಲಿದ್ದರು.ಅನೇಕ ದಿನಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದು ಅಲ್ಪ ಕಾಲದ ಅಸೌಖ್ಯದಿಂದ ಇವತ್ತು ನಿಧನರಾಗಿದ್ದಾರೆ.