ಕಾರ್ಕಳ: ಸೆಪ್ಟೆಂಬರ್27;ಶ್ರೀ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇಲ್ಲಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯನ್ನು ಎಸ್.ವಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿಯವರಾದ ಶ್ರೀಯುತ ಕೆ.ಪಿ ಶೆಣೈ ಅವರು ಉದ್ಘಾಟಿಸಿ ವಿದ್ಯಾರ್ಥಿನಿಯರಿಗೆ ಪ್ರಸ್ತುತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾಭ್ಯಾಸ ಉದ್ಯೋಗ ಪಡೆದ ಬಗ್ಗೆ ಮಾಹಿತಿ ನೀಡಿದರು
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್. ವಿ.ಟಿ.ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ನೇಮಿ ರಾಜ್ ಶೆಟ್ಟಿ ಯವರು ಸಿಕ್ಕಿದ ಎಲ್ಲಾ ಅವಕಾಶಗಳನ್ನು ಉಪಯೋಗಿಸಿ ಮೌಲ್ಯಧಾರಿತ ಜೀವನ ರೂಪಿಸುವ ಬಗ್ಗೆ ಮಾಹಿತಿ ನೀಡಿದರು
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಉಷಾ ನಾಯಕ್ ಅವರು ಸಭಾಧ್ಯಕ್ಷತೆ ವಹಿಸಿಕೊಂಡು ಜೀವನ ಮೌಲ್ಯಗಳು ಬಗ್ಗೆ ವಿವರಿಸಿದರು
ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀ ಸೀತಾರಾಮ ನಾಯಕ್ ವಿದ್ಯಾರ್ಥಿನಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು ವಿದ್ಯಾರ್ಥಿ ಪ್ರತಿನಿಧಿಗಳಾದ ಸೌಜನ್ಯ ಚೈತ್ರ ಪವಿತ್ರ ಮತ್ತು ನವ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಕು. ಸೌಜನ್ಯ ಸ್ವಾಗತಿಸಿ ಕು. ಚೈತ್ರ ವಂದಿಸಿದರು ಕು.ಯಶಸ್ವಿನಿ ಕಾರ್ಯಕ್ರಮ ನಿರೂಪಿಸಿದರು