ಬೆಂಗಳೂರು : ಸೆಪ್ಟೆಂಬರ್ 28:ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯಕ್ತದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸೊಮವಾರದಿಂದ ತನಿಖೆ ಆರಂಭವಾಗಲಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ಕೋರ್ಟ್ ಲೋಕಾಯುಕ್ತಗೆ ಆದೇಶ ಹೊರಡಿಸಿತ್ತು
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ನಿನ್ನೆ ಶುಕ್ರವಾರ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ಎ1, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಎ 2, ಸಹೋದರ ಮಲ್ಲಿಕಾರ್ಜುನ ಸ್ವಾಮಿ ಎ 3, ಜಮೀನು ಮಾರಿದ ದೇವರಾಜು ಎ-4 ಆರೋಪಿ ಎಂದು ಗುರುತಿಸಲಾಗಿದೆ.