ಕಾಪು:ಸೆಪ್ಟೆಂಬರ್ 29: ರಾಷ್ಟ್ರೀಯ ಹೆದ್ದಾರಿ 66ರ ಕಾಪು ಮಸೀದಿ ಜಂಕ್ಷನ್ ಬಳಿ ಕಾರು ಮತ್ತು ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದುಕೊಂಡು ರಿಕ್ಷಾ ಚಾಲಕ ಸಹಿತ ಇಬ್ಬರು ಗಾಯಗೊಂಡ ಘಟನೆ ಶನಿವಾರ ರಾತ್ರಿ ಸಂಭವಿಸಿದೆ
ರಿಕ್ಷಾ ಚಾಲಕ ಪೂರ್ಣೇಶ್ ಮತ್ತು ಪ್ರಯಾಣಿಕ ನೂರ್ಸಾಹೇಬ್ ಗಾಯಗೊಂಡವರು. ಕೇರಳದಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು ಕಾಪು ಪೇಟೆಯಿಂದ ಪೊಲಿಪು ಕಡೆಗೆ ತೆರಳುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.
ಗಾಯಾಳುಗಳನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.