ಉಡುಪಿ :ಸೆಪ್ಟೆಂಬರ್ 29: ಕುಂದಾಪುರ ಮೂಲದ ಚೈತ್ರಾ ಈ ಬಾರಿ ಬಿಗ್ ಬಾಸ್ ಮನೆಯೊಳಗೆ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಕಳೆದ ಕೆಲ ಸಮಯದ ಹಿಂದಷ್ಟೇ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿದ ಆರೋಪ ಅವರ ಮೇಲೆ ಕೇಳಿ ಬಂದಿತ್ತು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು.
ಸತ್ಯ ಧಾರಾವಾಹಿ ಖ್ಯಾತಿಯ ನಟಿ ಗೌತಮಿ ಜಾಧವ್, ಜನಪ್ರಿಯ ವಕೀಲ ಜಗದೀಶ್, ಅಥಣಿಯ ಗೋಲ್ಡ್ ಸುರೇಶ್ ಮತ್ತು ಚೈತ್ರಾ ಕುಂದಾಪುರ ಬಿಗ್‌ಬಾಸ್ ಮನೆ ಸೇರೋದು ಖಚಿತವಾಗಿದೆ.
ಇಂದು ಸಂಜೆ 6 ಗಂಟೆ ಬಿಗ್‌ಬಾಸ್ ಗ್ರ್ಯಾಂಡ್ ಓಪನಿಂಗ್ ನಡೆಯಲಿದೆ. ಪ್ರತಿದಿನ ರಾತ್ರಿ 9.30ಕ್ಕೆ ಬಿಗ್‌ಬಾಸ್ ರಿಯಾಲಿಟಿ ಶೋ ಪ್ರಾರಂಭವಾಗಲಿದೆ.