ಉಡುಪಿ :ಸೆಪ್ಟೆಂಬರ್ 30:ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಘಟಕದ ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18ರಿಂದ 30 ವರ್ಷದೊಳಗಿನ ವಯೋಮಿತಿಯ ಎಸೆಸೆಲ್ಸಿ ಅಥವಾ ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್‌ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ, ದೂ.ಸಂಖ್ಯೆ: 0820-2532222, ಮೊ.ನಂ:8310311448 ಅಥವಾ 9741762007ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.