ಕಾರ್ಕಳ: ಸೆಪ್ಟೆಂಬರ್ 30: ಈಚರ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟು ಇಬ್ಬರು ತೀವ್ರ ತರದಲ್ಲಿ ಗಾಯಗೊಂಡ ಘಟನೆ ಕಾರ್ಕಳದ ಪಾಜಿಗುಡ್ಡೆ ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಮಕ್ಕಳು ಮತ್ತು ಓರ್ವ ಗಂಡಸು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಓರ್ವ ಮಗು ಮತ್ತು ಮಹಿಳೆ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.,
ಬೈಕ್ ನಲ್ಲಿ ಐದು ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.