ಕಾರ್ಕಳ : ಅಕ್ಟೋಬರ್ 01:ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀಮದ್ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪಿಯುಸಿ ವಿಭಾಗದ ಬಾಲಕ – ಬಾಲಕಿಯರ ಖೋ ಖೋ ಪಂದ್ಯಾಟದಲ್ಲಿ ಎಸ್. ವಿ. ಟಿ. ವನಿತಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
ತಂಡದ ಸವ್ಯಸಾಚಿ ಆಟಗಾರ್ತಿಯಾಗಿರುವ ದ್ವಿತೀಯ ವಾಣಿಜ್ಯ ವಿಭಾಗದ ಕು. ದೀಪಿಕಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಕ್ರೀಡಾಪಟುಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ಪ್ರಭಾವತಿ ಹೆಗ್ಡೆ, ಹಾಗೂ ಕೋಚ್ ದಿನೇಶ್ ಹಾಗೂ ಕೀರ್ತನ್ ತರಬೇತಿ ನೀಡಿರುತ್ತಾರೆ.
ಸಾಧನೆಗೈದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಚಾರ್ಯರು ಹಿರಿಯ ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿರುತ್ತಾರೆ.