ಹೆಬ್ರಿ :ಅಕ್ಟೋಬರ್ 02: ಬಸ್ಸಿನಲ್ಲಿದ್ದ ಪ್ರಯಾಣಿಕರೊಬ್ಬರು ಅಸ್ವಸ್ಥ ಗೊಂಡ ಹಿನ್ನೆಲೆಯಲ್ಲಿ ಸರ್ಕಾರಿ ಬಸ್ ಸಿಬ್ಬಂದಿಗಳು ನೇರವಾಗಿ ಹೆಬ್ರಿಯ ಸರ್ಕಾರಿ ಸಮುದಾಯ ಕೇಂದ್ರ ಆಸ್ಪತ್ರೆಗೆ ದಾಖಲು ಮಾಡಿ ಜೀವ ಉಳಿಸಿದ ಘಟನೆ ಸೋಮವಾರ ಸಂಜೆ ನಡೆದಿದೆ.
ಸರ್ಕಾರಿ ಬಸ್ ಶಿವಮೊಗ್ಗದಿಂದ ಉಡುಪಿಯತ್ತ ಬರುತ್ತಿತ್ತು. ಸುರಕ್ಷಾ ಎಂಬವರು ಮೇಗರವಳ್ಳಿಯಲ್ಲಿ ಬಸ್ ಹತ್ತಿದ್ದರು. ಆಗುಂಬೆ ಘಾಟಿಯಲ್ಲಿ ತೀವ್ರ ಅಸ್ವಸ್ಥಗೊಂಡಾಗ ನಿರ್ವಾಹಕ ವಾಸಿಮ್ ದೇಸಾಯಿ ಆಕೆಯ ಸಹಾಯಕ್ಕೆ ಬಂದಿದ್ದಾರೆ. ತೀವ್ರವಾಗಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಸೋಮೇಶ್ವರದ ಉಪ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಕರೆದುಕೊಂಡು ಹೋದಾಗ, ಸುರಕ್ಷಾ ಯಾವುದೇ ರೀತಿಯ ಚೇತರಿಕೆ ಕಂಡು ಬಂದಿಲ್ಲ. ಅಲ್ಲಿಂದ ನೇರವಾಗಿ ಪ್ರಯಾಣಿಕರ ಸಹಕಾರದೊಂದಿಗೆ ಹೆಬ್ರಿಯ ಸರ್ಕಾರಿ ಸಮುದಾಯ ಆಸ್ಪತ್ರೆಗೆ ಬಂದು ಅವರನ್ನು ದಾಖಲು ಮಾಡಲಾಗಿದೆ.
ಚಾಲಕ ತಾರೇಶ್ ಹಾಗೂ ನಿರ್ವಾಹಕ ವಾಸಿಮ್ ದೇಸಾಯಿ ಸುರಕ್ಷಾ ಚೇತರಿಕೆಗೆ ಬಹಳಷ್ಟು ಶ್ರಮವಹಿಸಿದರು. ಬಸ್ಸಿನಲ್ಲಿ ಮುಸ್ಲಿಂ ಯುವತಿಯೊಬ್ಬರು ಒಬ್ಬಳು ಬಾಯಿಗೆ ಶ್ವಾಸ ನೀಡಿ ಮಾನವೀಯತೆ ಮೆರೆದಿದ್ದಾಳೆ.
ಇವರೊಂದಿಗೆ ಸಿಬ್ಬಂದಿಗಳು ತೋರಿದ ಸಕಾಲಿಕ ಶ್ರಮದಿಂದ ಜೀವ ಉಳಿದಿದೆ. ಹೆಬ್ರಿಯ ಪೊಲೀಸರು, ಸಾರ್ವಜನಿಕರು ಅಭಿನಂದಿಸಿದ್ದಾರೆ.
ನನ್ನ ಸಹೋದ್ಯೋಗಿ ವಾಸಿಮ್ ದೇಸಾಯಿ ಯಾವುದನ್ನು ಲೆಕ್ಕಿಸದೆ ಯುವತಿಯನ್ನು ತುರ್ತಾಗಿ ಚಿಕಿತ್ಸೆ ನೀಡಲು ಹೊತ್ತುಕೊಂಡು ಹೋದ ರೀತಿ ನನಗೆ ಕಣ್ಣಲ್ಲಿ ಬರುತ್ತಿದೆ. ಮಹಿಳೆಯರು ಸಹಾಯಕ್ಕೆ ಬರಲೇ ಇಲ್ಲ. ಕುಳಿತುಕೊಳ್ಳಲು ಸೀಟು ತಪ್ಪಿ ಹೋಗುತ್ತದೆ ಎಂಬ ಭಯದಿಂದ ಯಾರೂ ಸಹಾಯಕ್ಕೆ ಬಂದಿಲ್ಲ. ಮುಸ್ಲಿಂ ಸಹೋದರ ಸಹೋದರಿಯಿಂದ ಸುರಕ್ಷಾ ಚೇತರಿಸಿಕೊಳ್ಳುತ್ತಿದ್ದಾಳೆ.
ಇದು ಸಮಾಜಕ್ಕೆ ಮಾದರಿಯಾಗಬೇಕು.ಹೆಬ್ರಿ ಪೊಲೀಸರು ಕೂಡ ಸೋಮೇಶ್ವರ ದಿಂದ ಹೆಬ್ರಿಯ ಆಸ್ಪತ್ರೆಯ ತನಕ ಝೀರೋ ಟ್ರಾಪಿಕ್ ವ್ಯವಸ್ಥೆ ನೀಡಿ ಯುವತಿಯ ಜೀವ ಉಳಿಸಲು ಸಹಕಾರ ನೀಡಿದ್ದಾರೆ.