ಉಡುಪಿ : ಅಕ್ಟೋಬರ್ 03:ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ತೃತೀಯ ವರ್ಷದ ದಸರಾ ಮಹೋತ್ಸವಕ್ಕೆ ಇಂದು ಉಡುಪಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿಯವರು ಶ್ರೀಕ್ಷೇತ್ರದ ಶ್ರೀಮತಿ ಶಾಲಿನಿ ಡಾ.ಜಿ.ಶಂಕರ್ ಸಭಾಂಗಣದಲ್ಲಿ ಚಾಲನೆ ನೀಡಿದರು
ಸಭಾಂಗಣದಲ್ಲಿ ಆಕರ್ಷಕವಾಗಿ ನಿರ್ಮಿಸಲಾಗಿರುವ ಮಂಟಪದಲ್ಲಿ ನವದುರ್ಗೆಯರ ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹಗಳನ್ನು ಕ್ಷೇತ್ರದ ತಂತ್ರಿಗಳಾದ ಕುಕ್ಕಿಕಟ್ಟೆ ರಾಘವೇಂದ್ರ ತಂತ್ರಿ ಹಾಗೂ ಪ್ರಧಾನ ಪುರೋಹಿತರಾದ ಕೆವಿ ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಪ್ರತಿಷ್ಠಾಪಿಸಲಾಗಿದೆ.
ಪುರೋಹಿತರಾದ ಕೆ.ವಿ ರಾಘವೇಂದ್ರ ಉಪಾಧ್ಯಾಯರು ಪ್ರತಿಷ್ಠಾಪನಾ ಪೂಜೆ ನೆರವೇರಿಸಿ ಪ್ರಸಾದ ವಿತರಿಸಿದರು.
ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ. ಶಂಕರ್ ಅವರು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಕಾಪು ತಹಶಿಲ್ದಾರ್, ಡಾ.ಪ್ರತಿಭಾ ಆರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಪೂರ್ಣಿಮ, ಉಧ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಮಾತನಾಡಿ, ಈ ಬಾರಿಯ ಉಡುಪಿ – ಉಚ್ಚಿಲ ನಾಡಹಬ್ಬ ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ತಾಯಿ ಶಾರದೆ ಎಲ್ಲಾ ಜನರಿಗೆ ಮಂಗಳ ಉಂಟು ಮಾಡಲಿ ಎಂದು ಹಾರೈಸಿದರು.
ದಸರಾ ಮಹೋತ್ಸವ ಪ್ರಯುಕ್ತ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ, ಗುಡಿ ಕೈಗಾರಿಕಾ ಪ್ರಾತ್ಯಕ್ಷಿಕೆ, ಸಮುದ್ರದ ಜೀವಂತ ಮೀನುಗಳ ಪ್ರದರ್ಶನ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿ ಲಭ್ಯವಿರುವ ಮೀನುಗಾರಿಕೆ ಯೋಜನೆಗಳ ಮಾಹಿತಿ ಮತ್ತು ಮೀನುಗಾರಿಕಾ ಪರಿಕರಗಳ ಪ್ರದರ್ಶನ ಸೇರಿದಂತೆ ವಿವಿಧ ಪ್ರದರ್ಶನಗಳ ಉದ್ಘಾಟನೆ ನೆರವೇರಿತು.
ದೇವಳದ ಪ್ರಬಂಧಕ ಸತೀಷ್ ಅಮೀನ್ ಪಡುಕೆರೆ ನಿರೂಪಿಸಿದರು.