ಕೊಲ್ಲೂರು:ಅಕ್ಟೋಬರ್ 05: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಾಬು ಶೆಟ್ಟಿ ಅವರು ಶುಕ್ರವಾರ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆಯಾಗಿದ್ದು ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಇಂದು ದೇವಸ್ಥಾನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ, ಸಹಾಯಕ ಆಯುಕ್ತರಾದ ಮಹೇಶ್ಚಂದ್ರ, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಪ್ರಧಾನ ಅರ್ಚಕರಾದ ನಿತ್ಯಾನಂದ ಅಡಿಗ, ಮಹಾಲಿಂಗ ವೆಂಕನಾಯ್ಕ್, ಶ್ರೀಮತಿ ಧನಾಕ್ಷಿ, ಶ್ರೀಮತಿ ಸುಧಾ ಕೆ, ಕೆ. ಸುರೇಂದ್ರ ಶೆಟ್ಟಿ, ಅಭಿಲಾಷ್ ಪಿ. ವಿ, ಯು. ರಾಜೇಶ್ ಕಾರಂತ್, ರಘುರಾಮ ದೇವಾಡಿಗ ಉಪಸ್ಥಿತರಿದ್ದರು.
ಕಳೆದ ಒಂದು ವರ್ಷದಿಂದ ಆಡಳಿತ ಸಮಿತಿ ನೇಮಕವಾಗದೆ ಅತಂತ್ರವಾಗಿತ್ತು. ಕೊನೆಗೂ ವ್ಯವಸ್ಥಾಪನಾ ಸಮಿತಿ ರಚನೆಗೊಂಡಿತ್ತು.