ಉಡುಪಿ:ಅಕ್ಟೋಬರ್ 08: ಡಾ.ಬಾಬು ಜಗಜೀವನ ರಾಮ್ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ(ಲಿಡ್ಕರ್ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನ ಗೊಳಿಸಲಾದ ಕಾಯಕ ಸ್ಪೂರ್ತಿ (ಮಹಿಳೆಯರಿಗೆ) ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ, ಕೌಶಲ್ಯ ಉನ್ನತೀಕರಣ ಯೋಜನೆ, ಚರ್ಮಶಿಲ್ಪಿ ಯೋಜನೆ, ಚರ್ಮಕಾರರ ವಸತಿ ಯೋಜನೆ, ಚರ್ಮಕಾರರ ಕಿರು ಆರ್ಥಿಕ ಚಟುವಟಿಕೆಗಳಿಗಾಗಿ ನೇರ ಸಾಲ ಯೋಜನೆ ಹಾಗೂ ಸ್ವಾವಲಂಬಿ/ ಸಂಚಾರಿ ಮಾರಾಟ ಮಳಿಗೆ ಯೋಜನೆಯ ಸೌಲಭ್ಯ ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಚರ್ಮ ಕುಶಲ ಕರ್ಮಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ
https://sevasindhu.karnataka.gov.in- ಸೇವಾಸಿಂಧು ಪೋರ್ಟಲ್ ಮೂಲಕ ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .
ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ