ಉಡುಪಿ :ಅಕ್ಟೋಬರ್ 08:ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಮುಂದಿರಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಅಧಿಕಾರಿಗಳು ಹಾಗೂ ನೌಕರರ ಎಲ್ಲ ವೃಂದದ ಸಂಘಗಳು ಹಾಗೂ ಗ್ರಾ.ಪಂ. ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಸೋಮವಾರ ದಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗಿದೆ.ಇಂದು ಕೂಡ ಮುಷ್ಕರ ಮುಂದುವರಿದಿದ್ದು ಬೇಡಿಕೆ ಈಡೇರಿಸದಿದ್ದರೆ ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಪ್ರತಿಭಟನಕರಾರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ
ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಭೇಟಿ ನೀಡಿ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರಕಾರಕ್ಕೆ ಅಗ್ರಹಿಸುವುದಾಗಿ ಭರವಸೆ ನೀಡಿದರು
ಈ ಸಂದರ್ಭದಲ್ಲಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ನಗರಸಭೆ ಅಧ್ಯಕ್ಷರಾದ ಶ್ರೀ ಪ್ರಭಾಕರ ಪೂಜಾರಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷರಾದ ಶ್ರೀ ದಿನೇಶ್ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ಶ್ರೀ ರಾಜೀವ್ ಕುಲಾಲ್ ಮೊದಲಾದವರು ಉಪಸ್ಥಿತರಿದ್ದರು.