ಉಡುಪಿ : ಅಕ್ಟೋಬರ್ 14:ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿ ಮಾಲಕತ್ವದ ದುಬೈ ನ ಹೊಟೇಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋ.ರೂ. ಗೂ ಅಧಿಕ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಡುಪಿ ಸೆನ್ ಠಾಣೆ ಪೊಲೀಸರು ಮೈಸೂರು ಜಿಲ್ಲೆಯ ನಂಜನಗೂಡು ಬಳಿ ಬಂಧಿಸಿದ್ದಾರೆ.
ಬಾರ್ಕೂರು ಮೂಲದ ನಾಗೇಶ್ ಪೂಜಾರಿ (31) ಬಂಧಿತ ಆರೋಪಿ.ಈತನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ಈತನನ್ನು ಅಕ್ಟೋಬರ್ 16 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ಆರೋಪಿ ಪಡೆದಿದ್ದ ಜಾಮೀನನ್ನು ಜಿಲ್ಲಾ ಸೆಶನ್ಸ್ ನ್ಯಾಯಾಲಯ ಹಾಗೂ ರಾಜ್ಯ ಉಚ್ಚ ನ್ಯಾಯಾಲಯ ರದ್ದುಪಡಿಸಿತ್ತು. ಈ ಹಿನ್ನೆಲೆ ಯಲ್ಲಿ ತಲೆಮರೆಸಿ ಕೊಂಡಿದ್ದ ಆತನನ್ನು ಪೊಲೀಸರು ಬಂಧಿಸಿದ್ದಾರೆ