ಮೈಸೂರು :ಅಕ್ಟೋಬರ್ 15:ನಾಡಹಬ್ಬ ಮೈಸೂರು ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಮಂಡ್ಯ ಜಿಲ್ಲೆ ಸಾದರಪಡಿಸಿದ ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಆಣೆಕಟ್ಟು ಸ್ತಬ್ಧ ಚಿತ್ರಕ್ಕೆ ಪ್ರಥಮ ಸ್ಥಾನ ಪಡೆದಿದೆ.
ಕೃಷಿ ಪ್ರಧಾನ ಮಂಡ್ಯ ಜಿಲ್ಲೆಯ ಹಿರಿಮೆ ಮತ್ತು ಪ್ರತಿಷ್ಠೆಯಾದ ವಿಶ್ವವಿಖ್ಯಾತ ಕೆಆರ್‌ಎಸ್ ಜಲಾಶಯ ಹಾಗೂ ರಂಗನತಿಟ್ಟು ಪಕ್ಷಿಧಾಮದ ಪ್ರತಿರೂಪ ಮಾದರಿಯನ್ನು ಈ ಬಾರಿಯ ಮೈಸೂರು ದಸರಾ ಮೆರವಣಿಗೆಯಲ್ಲಿ ಪ್ರದರ್ಶನ ಮಾಡಲಾಗಿತ್ತು.
ಕರ್ನಾಟಕದ ಪಕ್ಷಿಕಾಶಿ ಎಂದೇ ಹೆಸರುವಾಸಿಯಾಗಿರುವ ರಂಗನತಿಟ್ಟು ಪಕ್ಷಿಧಾಮ ಸ್ತಬ್ಧ ಚಿತ್ರ ಎಲ್ಲರ ಗಮನ ಸೆಳೆದಿತ್ತು. ದಸರಾ ಮಹೋತ್ಸವದಲ್ಲಿ ಪ್ರಥಮ ಸ್ಥಾನ ಗಳಿಸಿರುವುದು ಜಿಲ್ಲೆಗೆ ಹಮ್ಮೆಯ ವಿಷಯವಾಗಿದೆ.
ಹೀಗಿದೆ ಬಹುಮಾನಿತ ಸ್ತಬ್ಧ ಚಿತ್ರಗಳ ಪಟ್ಟಿ
1.ಮಂಡ್ಯ – ರಂಗನತಿಟ್ಟು ಪಕ್ಷಿಧಾಮ ಹಾಗೂ ಕೃಷ್ಣರಾಜಸಾಗರ ಅಣೆಕಟ್ಟು
2.ಧಾರವಾಜ- ಇಸ್ರೋ ಗಗನಯಾನದಲ್ಲಿ ಹಣ್ಣಿನ ನೊಣಗಳು.
3.ಚಾಮರಾಜನಗರ – ಸೋಲಿಗರ ಸೊಗಡು ಒಮ್ಮೆ ನೀ ಬಂದು ನೋಡು
4.ಉಡುಪಿ – ಜಿಲ್ಲೆಯ ಸಾಂಸ್ಕೃತಿಕ ವೈಭವ ಹಾಗೂ ಕರಾವಳಿಯ ಸೊಬಗು
5.ಗದಗ – ಗ್ರಾಮ ಸಭೆ-ಹಳ್ಳಿಯ ವಿಧಾನಸಭೆ
6.ಮೈಸೂರು -ಮಾನವಕುಲದ ಸಮಾನತೆ, ಧಾರ್ಮಿಕ ಬೆಳಕಿನಿಂದ ಸಾಂವಿಧಾನಿಕ ನ್ಯಾಯದವರೆಗೆ
7.ಚಿಕ್ಕಮಗಳೂರು – ತೇಜಸ್ವಿ ವಿಸ್ಮಯ ಲೋಕ