ಉಡುಪಿ :ಅಕ್ಟೋಬರ್ 16:ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಉಡುಪಿ ಜಿಲ್ಲೆ ಇವರ ವತಿಯಿಂದ ಆಯೋಜಿಸಿದ್ದ ವಾರ್ಷಿಕ ಮಹಾಸಭೆ ಹಾಗೂ ರಜತ ಸಂಭ್ರಮ ಕಾರ್ಯಕ್ರಮವನ್ನು ಪರ್ಯಾಯ ಶ್ರೀ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಉದ್ಘಾಟಿಸಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಯಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಭಾಗವಹಿಸಿ ಸಂಸ್ಥೆಯ ಕಾರ್ಯ ಯೋಜನೆಗಳಿಗೆ ಶುಭ ಹಾರೈಸಿದರು.