ಬೆಂಗಳೂರು :ಅಕ್ಟೋಬರ್ 16:ಬೆಂಗಳೂರಿನ ಪಟ್ಟಣಗೆರೆಯ ಶೆಡ್ನಲ್ಲಿ ಬರ್ಬರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಅವರ ಪತ್ನಿ ಗಂಡುಮಗುವಿಗೆ ಜನ್ಮ ನೀಡಿದ್ದಾರೆ.
ರೇಣುಕಾ ಸ್ವಾಮಿ ನಿಧನ ಹೊಂದುವಾಗ ಅವರ ಪತ್ನಿ ಸಹನಾಗೆ ಐದು ತಿಂಗಳು. ಈಗ ಅವರು ಗಂಡುಮಗುವಿಗೆ ಜನ್ಮ ನೀಡಿದ್ದಾರೆ.
ಇಂದು ಬೆಳಗಿನ ಜಾವ 5 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ -ಮಗು ಆರೋಗ್ಯವಾಗಿದ್ದಾರೆ ಅಲ್ಲದೆ ಕೀರ್ತಿ ಆಸ್ಪತ್ರೆಯಿಂದ ಡಾ.ಮಲ್ಲಿಕಾರ್ಜುನ್ ಸಂಪೂರ್ಣ ಉಚಿತ ಚಿಕಿತ್ಸೆ ನೀಡಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿದ್ದು, ಸದ್ಯ ಇದುವರೆಗೂ ತನಿಖೆ ಮುಂದುವರಿದಿದೆ