ಉಡುಪಿ :ಅಕ್ಟೋಬರ್ 17: ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ನವೆಂಬರ್ 16ರಂದು ನಡೆಯುವ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉದ್ಯಮಿ ವಿಜಯ ಸಂಕೇಶ್ವರ ಅವರಿಗೆ ಪಂಚವರ್ಣ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಪ್ರಶಸ್ತಿ ₹20 ಸಾವಿರ ಮೌಲ್ಯದ ಬೆಳ್ಳಿ ಫಲಕ, ನಗದು ಒಳಗೊಂಡಿದೆ.
ಕೋಟದ ಗಾಂಧಿ ಮೈದಾನದಲ್ಲಿ ಅಂದು ‘ಸದ್ಭಾವನಾ 2024’ ಶೀರ್ಷಿಕೆಯಡಿ ನಡೆಯುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು, ಪರಿಸರ ಸ್ನೇಹಿ ಸಂಘಟನೆ ಸ್ವಚ್ಛ ಬ್ರಿಗೇಡ್ ಕಾರ್ಕಳ ತಂಡಕ್ಕೆ ವಿಶೇಷ ಪುರಸ್ಕಾರ ನೀಡಲಾಗುವುದು. ಪ್ರತಿಭಾ ಪುರಸ್ಕಾರ, ಅಶಕ್ತರಿಗೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ, ವಿದ್ಯಾರ್ಥಿವೇತನ ವಿತರಣೆ, ಸ್ಥಳೀಯ ಅಂಗನವಾಡಿಗೆ ಸಮವಸ್ತ್ರ, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಿಗೆ ದತ್ತಿನಿಧಿ ನೀಡಲಾಗುವುದು.
ನಟ ಎಸ್. ದೊಡ್ಡಣ್ಣ, ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಭಾಗವಹಿಸುವರು ಎಂದು ಸಂಘದ ಅಧ್ಯಕ್ಷ ಅಜಿತ್ ಆಚಾರ್, ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ ಗಾಣಿಗ ತಿಳಿಸಿದ್ದಾರೆ.