ಬೆಂಗಳೂರು : ಅಕ್ಟೋಬರ್ 18:ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.
ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆಯ ಹಿಟ್ಟು ಗ್ರಾಹಕರಿಗೆ ಸಿಗಲಿದೆ.