ಉಡುಪಿ. ಅ. 20 :- ಕಾರ್ಕಳದ ಕುಕ್ಕುಂದೂರಿನ ಮುಖ್ಯ ರಸ್ತೆಯಲ್ಲಿ ಬೈಕ್ ಮತ್ತು ಕಾರು ಅಪಘಾತವಾಗಿ ಬೈಕ್ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಹಾಗೂ ಕೆಲಸದ ನಿಮಿತ್ತ ಉಡುಪಿಗೆ ಬರುತ್ತಿದ್ದ ವಿಶಯಶೆಟ್ಟಿಯವರು ತಮ್ಮ ವಾಹನದಲ್ಲಿ ಗಾಯಾಳುಗಳನ್ನು ಕಾರ್ಕಳದ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತವಾದ ಕೂಡಲೇ ಗಾಯಾಳುಗಳನ್ನು ತುರ್ತು ಆಸ್ಪತ್ರೆಗೆ ದಾಖಲಿಸಲು ಆ ಸಮುದಲ್ಲಿ ಬಂದ ವಾಹನ ಸವಾರರು ನಿರಾಕರಿಸಿದ್ದರಿಂದ ಸ್ಥಳೀಯ ಯುವಕರು ಆಕ್ರೋಶಗೊಂಡಿದ್ದರು.
ಸಂಬಂಧಿಕರು ಕಾರ್ಕಳ ತಾಲೂಕು ಆಸ್ಪತ್ರೆಯನ್ನು ಸಂಪರ್ಕಿಸುವಂತೆ ವಿಶುಶೆಟ್ಟಿಯವರು ವಿನಂತಿಸಿದ್ದಾರೆ.