ಉಡುಪಿ :ಅಕ್ಟೋಬರ್ 21:ನೈಋತ್ಯ ರೈಲ್ವೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ಮಧ್ಯೆ ಒಂದು ಟ್ರಿಪ್ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ ಎಂದು ನೈಋತ್ಯ ರೈಲ್ವೆ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರಕಟಣೆ ನೀಡಿದೆ