ಮಂಗಳೂರು : ಅಕ್ಟೋಬರ್ 22: ದೀಪಾವಳಿ ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಲಿದೆ. ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ-ಮಂಗಳೂರು ಜಂಕ್ಷನ್ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲು ಓಡಿಸಲು ನಿರ್ಧರಿಸಿದೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಎಸ್ಎಸ್ಎಸ್ ಹುಬ್ಬಳ್ಳಿ – ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯ ಮಾಧ್ಯಮ ಪ್ರಕಟಣೆ ಹೊರಡಿಸಿದೆ.
ರೈಲು ಸಂಖ್ಯೆ 07311: ನವೆಂಬರ್ 2 ರಂದು ಶ್ರೀ ಸಿದ್ದಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ 4 ಗಂಟೆಗೆ ಹೊರಟು, ಮರುದಿನ ದಿನ ಬೆಳಗ್ಗೆ 11.25ಕ್ಕೆ ಮಂಗಳೂರು ಜಂಕ್ಷೆನ್ ತಲುಪಲಿದೆ.
ರೈಲು ಸಂಖ್ಯೆ 07312: ನವೆಂಬರ್ 3 ರಂದು ಮಂಗಳೂರು ಜಂಕ್ಷನ್ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು, ಮರುದಿನ ನವೆಂಬರ್ 4 ರಂದು ಬೆಳಗ್ಗೆ 7 ಗಂಟೆಗೆ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ತಲುಪಲಿದೆ
ಈ ರೈಲು ಎರಡೂ ದಿಕ್ಕುಗಳಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಯಶವಂತಪುರ, ಕುಣಿಗಲ್, ಚನ್ನರಾಯಪಟ್ಟಣೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟವಾಳ ನಿಲ್ದಾಣಗಳಲ್ಲಿ ನಿಲ್ಲುತ್ತದೆ.
ಈ ರೈಲು 1 ಎಸಿ ಟು ಟೈಯರ್ ಬೋಗಿಗಳು, 2 ಫಸ್ಟ್ ಎಸಿ ಕಮ್ ತ್ರಿ ಟೈಯರ್ ಬೋಗಿಗಳು, 3 ಎಸಿ ತ್ರಿ ಟೈಯರ್ ಬೋಗಿಗಳು, 5 ಸ್ವೀಪರ್ ಕ್ಲಾಸ್ ಬೋಗಿಗಳು, 2 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ ಬ್ರೇಕ್ ವ್ಯಾನ್ ಬೋಗಿಗಳು ಸೇರಿದಂತೆ 15 ಬೋಗಿಗಳನ್ನು ಹೊಂದಿದೆ.