ಉಡುಪಿ :ಅಕ್ಟೋಬರ್ 22:ಕಟಪಾಡಿ ಶಿರ್ವ ರಾಜ್ಯ ಹೆದ್ದಾರಿ ರಸ್ತೆಯುದ್ದಕ್ಕೂ ಗುಂಡಿಯಾಗಿದೆ. ಈ ರಸ್ತೆಯಲ್ಲಿ ಪ್ರತಿನಿತ್ಯ ವಾಹನ ಸವಾರರು ಪರದಾಡುತ್ತಿದ್ದಾರೆ. ಕಟಪಾಡಿ ಕುರ್ಕಾಲು ಶಂಕರಪುರದಿಂದ ಶಿರ್ವ ಸಂಪರ್ಕ ರಸ್ತೆ ಸುಮಾರು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದ್ದು ವಾಹನ ಸವಾರರಿಗೆ ದಿನನಿತ್ಯ ಕಿರಿಕಿರಿ ಉಂಟಾಗುತ್ತಿದೆ.
ಈ ಬಗ್ಗೆ ಮಾಧ್ಯಮದಲ್ಲಿ ವರದಿ ಪ್ರಕಟಿಸಿ ಗಮನ ಸೆಳೆದರೂ ಏನೂ ಪ್ರಯೋಜನ ಆಗಿಲ್ಲ. ಹೊಂಡ ಮುಚ್ಚುವ ಕಾರ್ಯಕ್ಕೂ ಮುಂದಾಗುತ್ತಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.
ಇದೀಗ ರಸ್ತೆಯಲ್ಲಿದ್ದ ಹೊಂಡಕ್ಕೆ ಬಾಳೆ ಗಿಡ ನೆಟ್ಟು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸಂಸದರು ಶಾಸಕರು ಇತ್ತ ಕೂಡಲೇ ಗಮನಹರಿಸಿ, ಈ ರಸ್ತೆಯನ್ನು ಸರಿಪಡಿಸಬೇಕಾಗಿದೆ.