ಬೆಂಗಳೂರು :ಅಕ್ಟೋಬರ್ 22:ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಇದೀಗ ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.
ಹೌದು ಜಾಮೀನು ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠದಲ್ಲಿ ವಿಚಾರಣೆ ನಡೆದಿದ್ದು, ಜಾಮೀನು ಅರ್ಜಿಯ ವಿಚಾರಣೆಯನ್ನು ಅಕ್ಟೋಬರ್ 28 ಕ್ಕೆ ಮುಂದೂಡಲಾಗಿದೆ.