ಉಡುಪಿ : ಅಕ್ಟೋಬರ್ 23:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಬಲಪಾಡಿ ಶ್ರೀ ವಿಠೋಬ ಭಜನಾ ಮಂದಿರದ ಪರಿಸರದ ನಿವಾಸಿ ಕರ್ನಾಟಕ ಪಾಲಿಟೆಕ್ನಿಕ್ ನಿವೃತ್ತ ಉದ್ಯೋಗಿ ಎ.ಮಾಧವ ಪೂಜಾರಿ (79 ವರ್ಷ) ಅವರು ಅ.22ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕರ್ನಾಟಕ ಪಾಲಿಟೆಕ್ನಿಕ್ ಸಂಸ್ಥೆಯ ಮಂಗಳೂರು, ಬಳ್ಳಾರಿ, ಚಿಕ್ಕಮಗಳೂರು ಕಚೇರಿಗಳಲ್ಲಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸಹಿತ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ, ಪ್ರಸಕ್ತ ಸಂಘದ ಭಜನಾ ಸಹ ಸಂಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ವರ್ಗ ಹಾಗೂ ಹಿತೈಷಿಗಳನ್ನು ಅಗಲಿದ್ದಾರೆ.