ಬೆಂಗಳೂರು: ಅಕ್ಟೋಬರ್ 23: ಸಿಪಿ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು (ಅಕ್ಟೋಬರ್ 23) ಬೆಂಗಳೂರಿನ ಕೆಪಿಸಿಸಿ ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ
ಕಾಂಗ್ರೆಸ್ ಸೇರ್ಪಡೆಗೆ ಇನ್ನೇನು ಕೆಲವೇ ನಿಮಿಷಗಳು ಬಾಕಿ ಇರುವಾಗಲೇ ಬಿಜೆಪಿ ಪ್ರಾಥಮಿಕ ಸದಸ್ಯ ಸ್ಥಾನಕ್ಕೆ ಯೋಗೇಶ್ವರ್ ರಾಜೀನಾಮೆ ನೀಡಿದ್ದಾರೆ. ವಾಟ್ಸಾಪ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದು, ಈ ದಿನ ನಾನು ರಾಜೀನಾಮೆಯನ್ನು ಸಲ್ಲಿಸುತ್ತಿದ್ದೇನೆ. ದಯವಿಟ್ಟು ನನ್ನ ರಾಜೀನಾಮೆ ಸ್ವೀಕರಿಸಬೇಕೆಂದು ಕೋರುತ್ತೇನೆ. ಇಲ್ಲಿಯವರೆಗೆ ನನಗೆ ತಾವು ನೀಡಿದ ಸಹಕಾರಕ್ಕಾಗಿ ವಂದನೆಗಳು ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಬಳಿಕ ಅವರು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು