ಕಾರ್ಕಳ :ಅಕ್ಟೋಬರ್ 24: ಜಿಲ್ಲಾ ಲೋಕಾಯುಕ್ತ ವತಿಯಿಂದ ತಾಲ್ಲೂಕು ಮಟ್ಟದ ಸಾರ್ವಜನಿಕ ಅಹವಾಲು ಸ್ವೀಕಾರ, ಜನಸಂಪರ್ಕ ಸಭೆ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆಯಿತು.
ಪುರಸಭೆ, ಸರ್ವೆ ಇಲಾಖೆ, ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ಸಂಬಂಧಿಸಿದ 19 ದೂರುಗಳನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಮಂಜುನಾಥ್,ತಹಶೀಲ್ದಾರ್ ಪ್ರತಿಭಾ ಆರ್.ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಇದ್ದರು. ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.