ಉಡುಪಿ :ಅಕ್ಟೋಬರ್ 24: ನ್ಯಾಯಾಲಯದಿಂದ ಜಾಮೀನು ಪಡೆದು ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಅಶ್ಮತ್ ಅಲಿಯನ್ನು (35) ಕಾಪು ಪೊಲೀಸರು ಅ. 22ರಂದು ಕೇರಳದ ಕಣ್ಣೂರು ಏರ್ಪೋರ್ಟ್ನಲ್ಲಿ ಬಂಧಿಸಿದ್ದಾರೆ.
ಆರೋಪಿ ವಿರುದ್ಧ 2019ರಲ್ಲಿ ಕಾಪು ಪೊಲೀಸ್ ಠಾಣೆಯಲ್ಲಿ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿ ಅದನ್ನು ವೀಡಿಯೋ ಮಾಡಿ ಬ್ಲಾಕ್ಮೇಲ್ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಈ ಈತ ಉಡುಪಿಯ 2ನೇ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯದಲ್ಲಿ 2019ರ ಸೆ. 6ರಂದು ಜಾಮೀನು ಪಡೆದು ಬಿಡುಗಡೆಯಾಗಿದ್ದ ಎನ್ನಲಾಗಿದೆ
ಈತನ ವಿರುದ್ಧ 18 ಬಾರಿ ಬಂಧನ ವಾರಂಟ್ ಹೊರಡಿಸಲಾಗಿತ್ತು.