ಉಡುಪಿ :ಅಕ್ಟೋಬರ್ 28: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಇಂದು ಸೋಮವಾರ ಪ್ರತಿಭಟನಾ ಸಭೆ ನಡೆಯಿತು.
ದಿವ್ಯಾಂಗರ ರಕ್ಷಣಾ ಸಮಿತಿಯ ವಿಜಯ್ ಕೊಡವೂರು ಮಾತನಾಡಿ, ರಾಜ್ಯದಲ್ಲಿ ಅಂಗವಿಕಲ ಹಕ್ಕುಗಳ ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸಭೆಯಲ್ಲಿ ಮಂಜುನಾಥ ಹೆಬ್ಬಾರ್, ರವೀಂದ್ರ ಹೆಮ್ಮಾಡಿ, ವೆಂಕಟೇಶ್, ಹರೀಶ್ ಶೆಟ್ಟಿ, ಭಾಗವಹಿಸಿದ್ರು
ಬೈಂದೂರು ಶಾಸಕ ಗುರುರಾಜ್ ಗಂಟಿಹೋಳೆ ಪಾಲ್ಗೊಂಡು ಬೆಂಬಲ ಸೂಚಿಸಿದರು
ಪ್ರತಿಭಟನಾ ಸಭೆಗೂ ಮೊದಲು ಮಣಿಪಾಲದ ಕಾಯಿನ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.
ಪ್ರತಿಭಟನಾ ಸಭೆಯ ನಂತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಯವರಿಗೆ ಮನವಿ ನೀಡಲಾಯಿತು