ಉಡುಪಿ :ಅಕ್ಟೋಬರ್ 31:ಜಿಲ್ಲೆಯಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ರಾಜ್ಯಸರ್ಕಾರದ ಸೂಚನೆಯಂತೆ ಹಸಿರುಪಟಾಕಿಗಳನ್ನು ಮಾತ್ರಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ.
ಕಿರಿದಾದ ಜನನಿಬಿಡ ಮತ್ತು ವಾಣಿಜ್ಯ ಸಂಕೀರ್ಣಗಳ ಸ್ಥಳಗಳಲ್ಲಿ ಯಾವುದೇ ಖಾಯಂ ಅಂಗಡಿ ಅಥವಾ ಕಟ್ಟಡಗಳಲ್ಲಿ ಚಿಲ್ಲರೆ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು , ಪಟಾಕಿಗಳ ದಾಸ್ತಾನು ಹಾಗೂ ಮಾರಾಟಕ್ಕೆ ಅನುಮತಿ ಇರುವುದಿಲ್ಲ .
ಪಟಾಕಿಗಳನ್ನು ಸರ್ಕಾರದ ಅಧಿಕಾರಿಗಳು ನಿಗಧಿಪಡಿಸಿದ ತೆರೆದಪ್ರದೇಶಗಳಲ್ಲಿ ಸ್ಥಳೀಯ ಆಡಳಿದ ವತಿಯಿಂದ ಅನುಮತಿ ನೀಡಲಾಗಿರುವ ತಾತ್ಕಾಲಿಕ ಮಳಿಗೆಗಳಲ್ಲಿ ಮಾತ್ರ ದಾಸ್ತಾನು ಮಾಡಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.
ಸವೋಚ್ಛನ್ಯಾಯಾಲಯವು ರಾತ್ರಿ 8 ರಿಂದ ರಾತ್ರಿ 10.00 ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.
ಮಕ್ಕಳು ಪಟಾಕಿಯನ್ನು ಸಿಡಿಸುವ ಸಂದರ್ಭದಲ್ಲಿ ಪೋಷಕರು ಜೊತೆಗಿದ್ದು, ಯಾವುದೇ ಅನಾಹುತಉಂಟಾಗದಅಂತೆ ಕಾಳಜಿವಹಿಸಬೇಕು. ಹಸಿರುಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರುತ್ತದೆ.
ಮಳಿಗೆಯಲ್ಲಿ ಅಡಿಗೆ ಅಥವಾ ಧೂಮಪಾನಕ್ಕೆ ಅವಕಾಶ ನೀಡಬಾರದು ಎಂಬ ಸೂಚನಾ ಫಲಕವನ್ನು ಹಾಕಬೇಕು. ಪಟಾಕಿಯನ್ನು ಹಗಲಿನ ವೇಳೆಯಲ್ಲಿ ಮಾತ್ರ ಮಾರಾಟಮಾಡಬೇಕು.
ರಾತ್ರಿವೇಳೆ ಮಳಿಗೆಯಲ್ಲಿ ಯಾರು ಮಲಗಬಾರದು. ಪಟಾಕಿ ಮಳಿಗೆಗಳಲ್ಲಿ ಪಟಾಕಿಗಳನ್ನು ಪೂರ್ವಾಹ್ನ 6 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮಾರಾಟ ಮಾಡಬಹುದಾಗಿದೆ.
ದೀಪಾವಳಿ ಸಮಯದಲ್ಲಿ ಉತ್ಪಾದನೆಯಾಗುವಂತ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.